SHARE

ಬೆಳಗಾವಿ: ಮುಂಬೈ ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣಾ ರಣಕಹಳೆ ಮೊಳಗಿಸಿದೆ. ಮುಂಬೈ ಕರ್ನಾಟಕಕ್ಕೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಬೆಳಗಾವಿಯ ಅಥಣಿ ಹೊರವಲಯದ ಕರಿಮಸುತಿ ಗ್ರಾಮದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಕನ್ನಡದಲ್ಲೆ ಭಾಷಣ ಪ್ರಾರಂಭಿಸಿದ ರಾಹುಲ್ ಗಾಂಧಿ, ಬಸವಣ್ಣನವರು ನುಡಿಯಂತೆ ನಡೆ ಎಂದು ಹೇಳಿದ್ದಾರೆ. ಅವರ ವಚನದಂತೆ ಸಿದ್ದರಾಮಯ್ಯ ಸರ್ಕಾರ ನಡೆದುಕೊಂಡಿದೆ ಎಂದು ಬಸವಣ್ಣನವರ ವಚನ ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಟೀಕಿಸಿದರು.

ಮೋದಿಯವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ, ಪ್ರತಿಯೊಬ್ಬರಿಗೆ 15 ಲಕ್ಷ ಕೊಡುತ್ತೇನೆ ಎಂದಿದ್ದರು. ಆದರೆ ನಾಲ್ಕು ವರ್ಷ ಕಳೆದರೂ ಇನ್ನೂ ಯಾರ ಖಾತೆಗೂ ಜಮೆಯಾಗಿಲ್ಲ. ಬಸವಣ್ಣನವರ ವಚನ ಬಳಸುವ ಪ್ರಧಾನಿ ಮೋದಿ, ನುಡಿದಂತೆ ನಡೆದಿಲ್ಲ. ನೀವು ಕೇವಲ ವೋಟಿಗಾಗಿ ಬಸವಣ್ಣನವರ ಹೆಸರು ಹೇಳುತ್ತಿದ್ದೀರಾ ಎಂದು ರಾಹುಲ್‌ ಗಾಂದಿ ಮೋದಿಯವರನ್ನು ಪ್ರಶ್ನಿಸಿದರು.ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ರೈತರ, ಬಡವರ, ದಲಿತರ, ಅಭಿವೃದ್ಧಿ ಮಾಡಿ, ದೇಶದ ಎರಡು ಕೋಟಿ ಯುವಕರಿಗೆ ಉದ್ಯೋಗ ಸೃಷ್ಟಿಸಿ ಉದ್ಯೋಗ ನೀಡುವುದಾಗಿ ಹೆಳಿದ್ದರು ಆದರೆ ಯಾವುದೇ ಬದಲಾವಣೆಯಾಗಿಲ್ಲ. ಆದರೆ ನಾವು ಕರ್ನಾಟಕದಲ್ಲಿ ಬಸವಣ್ಣನವರ ತತ್ವದಡಿ ಸರ್ವರ ಅಭಿವೃದ್ಧಿ ಮಾಡಿದ್ದೇವೆ ಎಂದು ತಿಳಿಸಿದರು.