SHARE

ಬೆಳಗಾವಿ: ಗಣೇಶೋತ್ಸವದ ಸಂಭ್ರಮ ನಗರದ ಎಪಿಎಂಸಿ ಠಾಣೆಯಲ್ಲಿ ಮೇರೆ ಮೀರಿತು. ಪ್ರತಿವರ್ಷದಂತೆ ಈ ವರ್ಷವೂ ಸಾರ್ವಜನಿಕರ ಸಹಯೋಗದಲ್ಲಿ ಠಾಣೆಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು.ಇನ್ಸಪೆಕ್ಟರ್ ಜೆ. ಎಂ. ಕಾಲಿಮಿರ್ಚಿ ಮತ್ತು ಸಿಬ್ಬಂಧಿ ಮೆರವಣಿಗೆಯಲ್ಲಿ ಗಣೇಶನನ್ನು ಆಹ್ವಾನಿಸಿ ಪೂಜೆ ಸಲ್ಲಿಸಿದರು.ಮುಸ್ಲಿಂ ಅಧಿಕಾರಿಯಾದರೂ ಹಿಂದೂ ಸಂಸ್ಕ್ರತಿಯ ವಿನಾಯಕನಿಗೆ ತಾವು ಠಾಣೆಯ ಅಧಿಕಾರ ವಹಿಸಿಕೊಂಡಾಗಿನಿಂದ ಪ್ರತಿವರ್ಷ ಸೇವೆ ಸಲ್ಲಿಸಿ ಧಾರ್ಮಿಕ ಐಕ್ಯತೆ, ಸಾಮಾಜಿಕ ಸಾಮರಸ್ಯ ಮೂಡಿಸಿ ಗಮನ ಸೆಳೆದಿದ್ದಾರೆ.