SHARE

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆ ಖಂಡನೀಯ ಎಂದು RCU ಸಿಂಡಿಕೇಟ್ ಸದಸ್ಯ ರಾಜು ಚಿಕ್ಕನಗೌಡ್ರ ತಿಳಿಸಿದ್ದಾರೆ. ಮಾಜಿ ಸಚಿವ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ನನ್ನ ವಿರುದ್ಧ ಮಾಡಿರುವ ಎಲ್ಲ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಅವರಿಗೆ ನನ್ನ ಬಗ್ಗೆ ತಪ್ಪು ಅಭಿಪ್ರಾಯ ಮೂಡುವಂತೆ ಮಾಹಿತಿ ನೀಡಲಾಗಿದೆ.

ವಿವಿ. ಯಲ್ಲಿ ಹಲವಾರು ಸಿಂಡಿಕೇಟ್ ಸದಸ್ಯರು ಇರುತ್ತಾರೆ, ಅದರಲ್ಲಿ ನಾನು ಕೂಡ ಒಬ್ಬನಾಗಿದ್ದಾನೆ. ನನಗೆ ನೀಡಿರುವ ಜವಾಬ್ದಾರಿಯನ್ನು ಪರಿಮಿತಿ ಒಳಗೆ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಮಾಡುತ್ತಿದ್ದೇನೆ. ವಿಶ್ವವಿದ್ಯಾಲಯಗಳು ರಾಜಕೀಯ ರಹಿತವಾಗಿರಬೇಕು ಎಂಬ ಸದಾಶಯ ನನ್ನದು. ನನ್ನ ಮೇಲೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾಡಿರುವ ಆರೋಪಗಳಿಗೆ ಯಾವುದೇ ರೀತಿಯ ತನಿಖೆಗೂ ನಾನು ಸಿದ್ಧ. ಎಲ್ಲರೂ ಒಗ್ಗೂಡಿ ರಾ.ಚ.ವಿ. ಅಭಿವೃದ್ಧಿ ಪಥದಲ್ಲಿ ಸಾಗುವಂತೆ ಮಾಡಬೇಕಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.