SHARE

ಬೆಳಗಾವಿ: ಜಿಲ್ಲೆಯ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ.ರಾಜೀವ ಅವರಿಗೆ ಬಂಧನದ ಭೀತಿ ಎದುರಾಗಿದೆ! 2016ರಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ಬೆಂಗಳೂರಿನ ವಿಶೇಷ ನ್ಯಾಯಾಲಯ ಪಿ. ರಾಜೀವ್ ವಿರುದ್ಧ ವಾರಂಟ್ ಜಾರಿ ಮಾಡಿರುವ ಮಾಹಿತಿ ಲಭ್ಯವಾಗಿದೆ.

2016ರಲ್ಲಿ ಶಾಸಕರಾಗಿದ್ದ ಪಿ.ರಾಜೀವ್ ಅವರು ಸಕ್ಕರೆ ಕಾರ್ಖಾನೆಗಳಿಂದ ಹಣ ಪಡೆದು ರೈತ ಪರ ನಿಲ್ಲುವುದನ್ನು ಬಿಟ್ಟು ಪ್ರತಿಭಟನೆ ಮಾಡುವುದನ್ನ ನಿಲ್ಲಿಸಿದ್ದಾರೆ. ಕುಡಚಿ ಕ್ಷೇತ್ರದ ಮಾಜಿ ಶಾಸಕ ಶಾಮ ಘಾಟಗೆ ಅವರಿಂದ ಆರೋಪ ಅಂದು ಕೇಳಿಬಂದಿತ್ತು ಎನ್ನಲಾಗಿದೆ. ಆ ಆರೋಪದ ಹಿನ್ನೆಲೆಯಲ್ಲಿ ಶಾಸಕ ರಾಜೀವ ನೇರವಾಗಿ ಅಂದು ಶಾಮ ಘಾಟಗೆ ಅವರ ಮನೆಗೆ ಹೋಗಿ ಅಭಿವೃದ್ಧಿ ಹಾಗೂ ಹಣ ಪಡೆದ ಬಗ್ಗೆ ಬಹಿರಂಗ ಚರ್ಚೆಗೆ ಆಹ್ವಾನಿಸಲು ತೆರಳಿದ್ದರು ಎಂಬ ವೇಳೆ ಶಾಮ ಘಾಟಗೆ ಮನೆಯಲ್ಲಿ ಇಲ್ಲದಿದ್ದರೂ ಕುಟುಂಬಸ್ಥರ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಶಾಸಕ ಪಿ.ರಾಜೀವ್ ಸೇರಿದಂತೆ ಅವರ ಬೆಂಬಲಿಗರ ಮೇಲೆ ಘಾಟಗೆ ಕುಟುಂಬ ಕುಡಚಿ ಪೊಲೀಸ್ ಠಾಣೆಯಲ್ಲಿ ಅವಾಚ್ಯ ಶಬ್ಧಗಳಿಂದ ನಿಂದನೆ ಸೇರಿದಂತೆ ಜಾತಿ ನಿಂದನೆ ಪ್ರಕರಣ ದಾಖಲು ಮಾಡಿತ್ತು. ಪ್ರಕರಣ ದಾಖಲಾದ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯ ವಾರಂಟ್​ ಜಾರಿ ಮಾಡಿರುವುದು ಬೆಳಕಿಗೆ ಬಂದಿದೆ.