SHARE

ಬೆಳಗಾವಿ: ತಿಲಾರಿ ಡ್ಯಾಂಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳ ಪೈಕಿ ಬೆಳಗಾವಿಯ ವಿದ್ಯಾರ್ಥಿ ಯೊಬ್ಬ ನೀರಿನಲ್ಲಿ ಮುಳುಗಿದ್ದಾನೆ. ಅರಣ್ಯ, ಪೊಲೀಸ್ ಹಾಗೂ ಮಹಾರಾಷ್ಟ್ರದ ಅಧಿಕಾರಿಗಳು ದೇಹಕ್ಕಾಗಿ ಶೋಧ ನಡೆಸಿದ್ದಾರೆ. ವಿನಯ ಸಂಜಯ ಕಾಂಬಳೆ(೧೮) ಎಂದು ಗುರುತಿಸಲಾಗಿದೆ.
ಮಹಾನಗರ ಪಾಲಿಕೆ ಎಂಜಿನೀಯರ್ ಲಕ್ಷ್ಮೀ ನಿಪ್ಪಾಣಿಕರ ಅವರ ಸಂಬಂಧಿ ಬಾಲಕ ಎಂದು ಗುರುತಿಸಲಾಗಿದೆ. ನಗರದ ಲಿಂಗರಾಜ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಮೊದಲ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ, ಪರೀಕ್ಷೆ ಮುಗಿದ ಖುಷಿಯಲ್ಲಿ ತೆರಳಿದ್ದರು ಎನ್ನಲಾಗಿದೆ.