SHARE

ಘಟಪ್ರಭಾ: ಮಾಜಿ ಸಚಿವ ರಮೇಶ ಜಾರಕಿಹೊಳಿ ಆಪ್ತ ಜಯಶೀಲ ಎನ್. ಶೆಟ್ಟಿ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗಿನಿಂದ ಐಟಿ ಅಧಿಕಾರಿಗಳು ಇಲ್ಲಿನ ಮಹಾಂತೇಶ ನಗರದಲ್ಲಿರುವ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಉದ್ಯಮಿ ಮತ್ತು ಪ್ರಥಮ ದರ್ಜೆ ಗುತ್ತಿಗೆದಾರ ಜಯಶೀಲ ನಾರಾಯಣ ಶೆಟ್ಟಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಮತ್ತು ಲಖನ್ ಜಾರಕಿಹೊಳಿ ಅವರ ಆಪ್ತ ಎನ್ನಲಾಗುತ್ತಿದೆ.