SHARE

ಬೆಳಗಾವಿ: ಶಾಲಾ ವಾಹನ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೆ ಸಾವಿಗೀಡಾದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಶಾಸಗಿ ಶಾಲಾ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ನಡೆದಿದೆ. ಚಿಕ್ಕೋಡಿ ಪಟ್ಟಣದ ಸೇಂಟ್ ಪ್ರಾನ್ಸಿಸ್ ಶಾಲೆಗೆ ಸೇರಿದ ಬಸ್ ಢಿಕ್ಕಿ ಹೊಡೆದು, ರಾಜನಂದಿನಿ (೫) ಸ್ಥಳದಲ್ಲೆ ಮೃಪಪಟ್ಟಿದ್ದಾಳೆ.

ಚಿಕ್ಕೋಡಿ ಪಟ್ಟಣದ ಮೆಹಬೂಬ ನಗರದ ಬಳಿ ಅಪಘಾತ ನಡೆದಿದ್ದು, ತಾಯಿ ಹಾಗೂ ಸಹೋದರ ಮಾವನೊಂದಿಗೆ ಬೈಕ್ ಮೇಲೆ ಹೊರಟಿದ್ದಳು. ರಾಜನಂದಿನಿ ತಾಯಿ ಹಾಗೂ ಮಾವನಿಗೂ ಸಹ ಸಣ್ಣ ಪುಟ್ಟ ಗಾಯಗಳಾಗಿವೆ. ತಿರುವಿನಲ್ಲಿ ಅತಿ ವೇಗದ ಬಸ್ ಚಲಾವಣೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.