SHARE

ಬೆಳಗಾವಿ:ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಯುವತಿಯ ತಂದೆ ಬೆಳಗಾವಿಯಲ್ಲಿ ದೂರು ನೀಡಿದ್ದಾರೆ. ಬೆಳಗಾವಿಯ ವಿಳಾಸ ನೀಡಿರುವ ಯುವತಿಯ ತಂದೆ, ತಮ್ಮ ಮಗಳನ್ನು ಮಾರ್ಚ್ 2ರಂದು ಬೆಂಗಳೂರಿನಲ್ಲಿ ಅಪರಿಚಿತರು ಅಪಹರಿಸಿದ್ದಾರೆ ಎಂದು ದೂರಿದ್ದಾರೆ. ಎಪಿಎಂಸಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಗಷ್ಟೆ ದೂರು ದಾಖಲಿಸಿಕೊಳ್ಳಲಾಗಿದೆ. ತನಿಖೆ ನಡೆಸಲಾಗುವುದು ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.