SHARE

ಗೋಕಾಕ್: ಹೊರವಲಯ ಮಹಾಂತೇಶ ನಗರದಲ್ಲಿ ಬೆಳಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ಯುವಕನನ್ನು 22 ವರ್ಷದ ಮಂಜು ಶಂಕರ್ ಮುರಕಿಭಾವಿ ಎಂದು ಗುರುತಿಸಲಾಗಿದೆ. ಈತ ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಯುವಕನ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದು, ಭಾನುವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಯುವಕನ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಠಾಣೆ ಪೆÇಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.